ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

Share


‘ಶ್ರೇಷ್ಠ ಭಾರತ್’ ಕಲ್ಪನೆಯನ್ನು ವಿಶ್ವಮಟ್ಟದಲ್ಲಿ ಸಾಕಾರಗೊಳಿಸಿದ ನಮ್ಮ ದೇಶದ ಹೆಮ್ಮೆಯ ಪ್ರಧಾನಿಯನ್ನು ಜಾತಿ ಹೆಸರಿನಲ್ಲಿ ಅವಹೇಳನ ಮಾಡಿದ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶ್ರೀ ಈಶ್ವರ ನಾಯ್ಕ ಕರೆ ನೀಡಿದ್ದಾರೆ.

ಬೆಂಗಳೂರಿನ ಬಿಜೆಪಿಯ ಪಕ್ಷದ ಕಚೇರಿಯಲ್ಲಿ ನಡೆದ ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ಸಂವಿಧಾನದಲ್ಲಿ ಜಾತ್ಯತೀತತೆಯ ಶಬ್ದವನ್ನು ಸೇರಿಸಿರುವ ಕಾಂಗ್ರೆಸ್ ಪಕ್ಷದ ನಾಯಕನ ಬಾಯಲ್ಲಿ ನಮ್ಮ ದೇಶದ ಪ್ರಧಾನ ಮಂತ್ರಿ ಹಿಂದುಳಿದವರಲ್ಲ ಎಂದು ಅವಹೇಳನ ಮಾಡಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರವಾಗಿದೆ. ‘ಜನಧನ’ಯೋಜನೆಯ ಮೂಲಕ ಎಲ್ಲ ವರ್ಗಗಳ ಜನರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಶಾಶ್ವತ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಕಾರಣರಾದ ಮತ್ತು ಹಲವು ಜನಪರ ಯೋಜನೆಗಳ ಮೂಲಕ ಹಿಂದುಳಿದ ವರ್ಗಗಳ ಬಡವರನ್ನು ಶ್ರೀಮಂತ ಗೊಳಿಸಿದ ನಮ್ಮ ನೆಚ್ಚಿನ ಪ್ರಧಾನಿಗಳ ಸರ್ಕಾರಿ ಯೋಜನೆಯನ್ನು ಅರ್ಥ ಮಾಡಿಕೊಳ್ಳದೆ ಕೇವಲ ವೋಟ್ ಬ್ಯಾಂಕ್ ಸೃಷ್ಟಿಸುವ ಧ್ಯೇಯದೊಂದಿಗೆ ಕೀಳು ಮಟ್ಟದ ಮಾತುಗಳಿಂದ ಪ್ರಧಾನಿಗಳನ್ನು ಅವಹೇಳನ ಮಾಡುವ ರಾಹುಲ್ ಗಾಂಧಿಯವರ ಹೇಳಿಕೆ ಬಾಲೀಷವಾಗಿದೆ.
ರಾಹುಲ್ ಗಾಂಧಿಯವರ ನ್ಯಾಯಜೋಡೋ ಯಾತ್ರೆ ಪ್ರತಿ ರಾಜ್ಯ ಪ್ರವೇಶಿಸುವಾಗ ಒಂದೊಂದೇ ಪಕ್ಷ ಕಡಿಮೆಯಾಗುತ್ತಿರುವುದನ್ನ ನೋಡಿ ಶ್ರೀ ರಾಹುಲ್ ಗಾಂಧಿಯವರಿಗೆ ಭ್ರಮನಿರಸನವಾಗಿದೆ. ತಮ್ಮ ಕ್ಯಾಬಿನೆಟ್ ನಲ್ಲಿ ಅತಿ ಹೆಚ್ಚು ಹಿಂದುಳಿದ ವರ್ಗಗಳ ಮಂತ್ರಿಗಳನ್ನ ಪಡೆದಿರುವುದು ಅವರ ಗಮನಕ್ಕೆ ಬರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಈ ಕೂಡಲೇ ತಾವು ನೀಡಿರುವ ಹೇಳಿಕೆಯನ್ನು ಹಿಂಪಡೆದುಕೊಳ್ಳಬೇಕು ಇಲ್ಲವಾದಲ್ಲಿ ಒಬಿಸಿ ಮೋರ್ಚಾ ದೇಶದಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶ್ರೀ ಈಶ್ವರ ನಾಯ್ಕ್ ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!