ಭಟ್ಕಳ: ಅಕ್ರಮವಾಗಿ ವಾಹನವೊಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಜಾನುವಾರು ರಕ್ಷಣೆ ಮಾಡಲಾಗಿದ್ದು ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ತಾಲೂಕಿನ ಸಾಗರ ರಸ್ತೆ ಬೇಟೆವೀರ ದೇವಸ್ಥಾನದ ಸಮೀಪ ನಡೆದಿದೆ.
ಯಾರೋ ಅಪರಿಚಿತ ಇಬ್ಬರು ಆರೋಪಿತರು ಶುಕ್ರವಾರ ಮದ್ಯಾಹ್ನ 2 ಗಂಟೆ ಸುಮಾರಿಗೆ ಮಹೀಂದ್ರಾ ಕ್ಸೈಲೋ(MAHINDRA XYLO) ವಾಹನದಲ್ಲಿ 40,000 ಮೌಲ್ಯದ ಒಂದು ಆಕಳು ಹಾಗೂ ಮೂರು ಹೋರಿಗಳನ್ನು ಹಿಂಸಾತ್ಮಕವಾಗಿ ಕಟ್ಟಿಕೊಂಡು ಅವುಗಳಿಗೆ ನೀರು, ಹುಲ್ಲು ಕೊಡದೆ ವಧೆ ಮಾಡುವ ಉದ್ದೇಶದಿಂದ ವಾಹನದಲ್ಲಿ ಸಕ್ಷಮ ಪ್ರಾಧಿಕಾರದಿಂದ ವಾಹನದಲ್ಲಿ ಸಾಗಾಟ ಮಾಡಲು ಪರವಾನಿಗೆ ಪಡೆಯದೇ ಸಾಗಾಟ ಮಾಡುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನದ ಮೇಲೆ ದಾಳಿ ನಡೆಸಿದಾಗ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿಕೊಂಡು ಹೋಗಿ ವಾಹನ ನಿಲ್ಲಿಸಿ ಚಾಲಕ ಹಾಗೂ ಇನ್ನೋರ್ವ ಆರೋಪಿ ಪರಾರಿಯಾಗಿದ್ದಾರೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.