ಭಟ್ಕಳ : ಇಲ್ಲಿನ ಪ್ರತಿಷ್ಠಿತ ಭಟ್ಕಳ ಎಜ್ಯುಕೇಶನ್ ಟ್ರಸ್ಟನ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ದಿಯಾ ಜಿ ಇವಳು ಅಚಿರ‍್ಸ ಚೆಸ್ ಸ್ಕೂಲ್,ಉತ್ತರಕನ್ನಡ ಹಾಗೂ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಭಟ್ಕಳ,ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ್ ಶಾಲಾವಲಯ ಚದುರಂಗ ಸ್ಪರ್ಧೆಯ ೧೪ ವರ್ಷದೊಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಅಗಸ್ಟ ತಿಂಗಳಿನಲ್ಲಿ ಕುಂದಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ದಿಯಾ ಜಿ ಇವಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು,ಪ್ರಾAಶುಪಾಲರು,ಶಿಕ್ಷಕ ವೃಂದ ಹಾಗೂ ಪಾಲಕರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.
“ಚದುರಂಗ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ದಿಯಾ ಜಿ”
