ದಿನಾಂಕ ೧೫.೦೮.೨೦೨೪ ಗುರುವಾರದಂದು ನಡೆದ ೭೮ ನೇ ಸ್ವಾತಂತ್ರö್ಯ ದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಭಟ್ಕಳ ತಾಲೂಕಾ ಮೈದಾನದಲ್ಲಿ ನಡೆದ ಪಥ ಸಂಚಲನದಲ್ಲಿ ಭಾಗವಹಿಸಿದ ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಅದ್ಬುತವಾದ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ಬೀನಾ ವೈದ್ಯ ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೂ, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ನಾಗರಾಜ ಚಂದ್ರು ಗೌಡ ಇವರಿಗೂ, ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸನ್ಮಾನ್ಯ ಶ್ರೀ ಮಂಕಾಳ್ ಎಸ್. ವೈದ್ಯ ಮಾನ್ಯ ಸಚಿವರು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉ.ಕ.ಜಿಲ್ಲಾ ಉಸ್ತುವಾರಿ ಸಚಿವರು, ಸಂಸ್ಥೆಯ ಆಡಳಿತ ನಿರ್ದೇಶಕಿಯವರಾದ ಡಾ. ಪುಷ್ಪಲತಾ ಎಂ ವೈದ್ಯರವರು, ಪ್ರಾಂಶುಪಾಲರು ಮತ್ತು ಸರ್ವ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿರುತ್ತಾರೆ.
ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಅದ್ಬುತವಾದ ಪ್ರದರ್ಶನ
