ಬೀನಾ ವೈಧ್ಯ ಶಿಕ್ಷಣ ಸಂಸ್ಥೆ ಯಲ್ಲಿ ವಿದ್ಯಾರ್ಥಿ ಸಂಸತ್ತನ್ನ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಾಯಿತು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತ ನರ‍್ದೇಶಕಿಯಾದ ಡಾ. ಪುಷ್ಪಲತಾ ಎಂ ವೈಧ್ಯರವರು ಮಾತನಾಡಿ ವಿದ್ಯಾರ್ಥಿ ಗಳು ನಾಯಕತ್ವದ ಗುಣಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಕಲಿಯಬೇಕು ಅದೇ ರೀತಿಯಲ್ಲಿ ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎನ್ನುವ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಭಟ್ಕಳ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತ್ ಇದರ ಅಧ್ಯಕ್ಷರಾದ ಗಂಗಾಧರ ನಾಯ್ಕ ರವರು ವಿದ್ಯಾರ್ಥಿ ಸಂಸತ್ತಿನ ಮಹತ್ವತೆಯ ಕುರಿತು ಅದೇ ರೀತಿಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯದ ಕುರಿತು ತಿಳಿಸಿದರು. ಸಭೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರು, ವಿದ್ಯಾರ್ಥಿ ನಾಯಕರುಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಬ್ಯಾಡ್ಜ್ ಪಡೆಯುವುದರ ಮೂಲಕ ಪ್ರಮಾಣವಚನವನ್ನು ಸ್ವೀಕರಿಸಿದರು.