
ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಲಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ವಿಭಾಗದಿಂದ
ವಿಶ್ವವಿದ್ಯಾಲಯ ಮಟ್ಟಕ್ಕೆ, ಮೆಹಂದಿ ಹಾಗೂ ಕೊಲಾಜ್ ಸ್ಪರ್ಧೆಗೆ ಕ್ರಮವಾಗಿ ಆಯ್ಕೆಯಾದ ಭಟ್ಕಳದ ಶ್ರೀ ಗುರು ಸುಧೀಂದ್ರ ಡಿಗ್ರೀ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳಾದ ಕುಮಾರಿ ಮೇಘಾ ನಾಯ್ಕ ಹಾಗೂ ಕುಮಾರ ಲೊಕೇಶ ಮೊಗೇರ ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಯುವಜನೋತ್ಸವ ತಂಡಕ್ಕೆ ಆಯ್ಕೆಯಾಗಿ, ಬೆಂಗಳೂರಿನ ಕ್ರೈಸ್ಟ್ ಯುನಿವರ್ಸಿಟಿಯಲ್ಲಿ ಜರುಗುವ ರಾಜ್ಯಮಟ್ಟದ ಸ್ಪರ್ಧೆಗೆ ವಿಶ್ವವಿದ್ಯಾಲಯವನ್ನು ಪ್ರತಿನೀಧಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆ, ಭಟ್ಕಳ ತಾಲೂಕು ಹೆಮ್ಮೆಪಡುವಂತೆ ಮಾಡಿದೆ ಎಂದು ಪ್ರಾಂಶುಪಾಲರಾದ ಶ್ರೀನಾಥ ಪೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆಡಳಿತ ಮಂಡಳಿ, ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.