-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಪೊಲೀಸ್ ಠಾಣೆಯ ನೂತನ ಕಟ್ಟಡ , ಹಾಗೂ ಪೊಲೀಸ್ ಉಪವಿಭಾಗದ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಜು 4 ರಂದು ಭೂಮಿ ಪೂಜೆ ಜರುಗಿತು. ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಾದ ಬಿ.ಕೆ. ಹರಿಬಾಬು ರವರು , ಹಾಗೂ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ಭೂಮಿ ಪೂಜೆ ನೆರವೇರಿಸಿದರು. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಹಳೇ ಪೊಲೀಸ್ ಠಾಣೆಯ ಹಳೇ ಕಟ್ಟಡ , ಪೂರ್ಣವಾಗಿ ಶಿಥಿಲ ವ್ಯವಸ್ಥೆಯಲ್ಲಿತ್ತು. ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ , ಅವರ ವಿಶೇಷ ಅನುದಾನದಡಿ 4 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದರು. ಆರಕ್ಷಕ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು , 24*7 ಕಾಲ ಜನರ ರಕ್ಷಣೆಗಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಅವರ ಸೇವೆ ಅನನ್ಯ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ , ಬಿ.ಕೆ. ಹರಿಬಾಬು ರವರು ವೇದಿಕೆಯಲ್ಲಿದ್ದರು. ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ, ಪ. ಪಂ. ಅಧ್ಯಕ್ಷರಾದ ಕಾವಲಿ ಶಿವಪ್ಪ ನಾಯಕರವರು ಮಾತನಾಡಿದರು. ಸಿಪಿಐ ಪ್ರಹ್ಲಾದ್ ಆರ್ ಚನ್ನಗಿರಿ ರವರು, ಪಟ್ಟಣ ಪಂಚಾಯ್ತಿ ಸದಸ್ಯರು , ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು , ಹಾಗೂ ಸಿಬ್ಬಂದಿ ವರ್ಗದವರು. ಸ್ಥಳೀಯ ಮುಖಂಡರು ನಾಗರೀಕರು ಮತ್ತು ವಿವಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
*ಕೂಡ್ಲಿಗಿ : ಪೊಲೀಸ್ ಠಾಣೆ ಹಾಗೂ ಉಪಅಧೀಕ್ಷರ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ*
