
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಏಳನೇ ಸೆಮಿಸ್ಟರ್ ನ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಡಿಯಲ್ಲಿ ಬರುವ ಪ್ರಮುಖ ಪ್ರಯೋಗಾಲಯವಾದ ಎಲೆಕ್ಟ್ರಾನಿಕ್ ಮತ್ತು ರಾಡರ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ನಲ್ಲಿ ಆರು ತಿಂಗಳ ಪ್ರತಿಷ್ಠಿತ ಇಂಟರ್ನಶಿಪ್ ಗೆ ಆಯ್ಕೆಯಾಗಿದ್ದಾರೆ.
ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಜುರೈಫ್ ಅಹಮದ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮೊಹಮ್ಮದ್ ಫಹಾದ್ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ
ಎಐಟಿಎಂನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ವರದಿ: ಉಲ್ಲಾಸ್ ಶಾನಭಾಗ ಶಿರಾಲಿ
