ಡಿ.ದೇವರಾಜು ಅರಸು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಉಪವಿಭಾಗಾಧಿಕಾರಿ ಕುಮಾರಿ ಕಾವ್ಯ ರಾಣಿ.

Share

ಭೂಸುಧಾರಣೆ ಕಾಯಿದೆಯ ಸಮರ್ಪಕ ಅನುಷ್ಠಾನದಿಂದ ರಾಜ್ಯದಲ್ಲಿ ಜೀತ ಪದ್ಧತಿ ಅಂತ್ಯವಾಯಿತು | ಸಹಾಯಕ ಆಯುಕ್ತೆ ಕುಮಾರಿ ಕಾವ್ಯರಾಣಿ ಕೆ

ಭಟ್ಕಳ : ಡಿ. ದೇವರಾಜ ಅರಸುರವರು ರಾಜ್ಯದಲ್ಲಿ ಭೂಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ ಕಾರಣಕ್ಕೆ, ಜೀತ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದುಳಿದ ವರ್ಗದ ರೈತರು ಸ್ವಂತ ಭೂಮಿಯನ್ನು ಹೊಂದುವಂತಾಯಿತು ಎಂದು ಭಟ್ಕಳ ಉಪ ವಿಭಾಗದ ಸಹಾಯಕ ಆಯುಕ್ತರಾದ ಕುಮಾರಿ ಕಾವ್ಯರಾಣಿ ಕೆ ಹೇಳಿದರು.

ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಭಟ್ಕಳ, ಪಟ್ಟಣ ಪಂಚಾಯತ ಜಾಲಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಡಿ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಳ್ಳಲಾದ ಹಿಂದುಳಿದ ವರ್ಗಗಳ ಧಿಮಂತ ನಾಯಕ, ಪರಿವರ್ತನೆಯ ಹರಿಕಾರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜೀತ ಪದ್ಧತಿ ನಿರ್ಮೂಲನೆಯಾಗಲು ಭೂಸುಧಾರಣೆ ಕಾಯಿದೆ ಕಾರಣವಾಯಿತು, ಡಿ ದೇವರಾಜ ಅರಸುರವರು ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳ ಉನ್ನತಿಗಾಗಿ ಶ್ರಮಿಸಿದ್ದರು ಎಂದರು.

ಪಿಯುಸಿ ನಂತರದ ವ್ಯಾಸಾಂಗ ಮಾಡುವಾಗ ವಿದ್ಯಾರ್ಥಿಗಳಿಗೆ ಹೆಚ್ಚಿನ ಸ್ವಾತಂತ್ರ್ಯವಿರುತ್ತದೆ. ಇದರಿಂದಾಗಿ ಇಲ್ಲಿ ಇಷ್ಟದ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಓದಬಹುದಾಗಿದೆ, ಜತೆಗೆ ಶೈಜ್ಷಣಿಕ ಪಠ್ಯಗಳ ಹೊರತಾದ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ರೂಡಿಸಿಕೊಳ್ಳುವ ಮೂಲಕ ಜ್ಞಾನಾರ್ಜನೆ ಮಾಡಿಕೊಳ್ಳಬಹುದಾಗಿದ್ದು, ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು, ದೈನಂದಿನ ಓದನ್ನು ಅಂದಿಗೆ ಮುಗಿಸುವ ಮೂಲಕ ಶೈಕ್ಷಣಿಕ ಸಾಧನೆ ಮಾಡಬಹುದಾಗಿದೆ. ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸಿಕೊಳ್ಳಲು ಯೋಗ, ಧ್ಯಾನವನ್ನು ಮಾಡಬೇಕು, ಹಾಸ್ಟೇಲ್ ವಾರ್ಡನ್ಸ್, ಪಾಂಶುಪಾಲರು ಇದರ ಕುರಿತಾಗಿ ಗಮನಹರಿಸಬೇಕು, ಮೂಲಭೂತ ಸೌಕರ್ಯಗಳು ವಿದ್ಯಾರ್ಥಿ ನಿಲಯದಲ್ಲಿ ಇಲ್ಲದಿರುವಾಗ ತಮ್ಮ ಗಮನಕ್ಕೆ ತರುವಂತೆ ಸಹಾಯಕ ಆಯುಕ್ತರು ಸೂಚಿಸಿದರು.

ತಹಶಿಲ್ದಾರ ನಾಗೇಂದ್ರ ಕೋಳಶೆಟ್ಟಿ‌ ಮಾತನಾಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ನೀಡುವ ತರಬೇತಿ ಕಾರ್ಯಗಾರದ ಸಂಪೂರ್ಣ ಪ್ರಯೋಜವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು.‌ ವಿದ್ಯಾರ್ಥಿಗಳು ಡಿ.ದೇವರಾಜ ಅರಸುರವರ ಆದರ್ಶವನ್ನು ಅನುಸರಿಸಬೇಕು ಎಂದರು.

ಕಳೆದ ಸಾಲಿನಲ್ಲಿ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು ವ್ಯಾಸಾಂಗ ಮಾಡಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪುರಸ್ಕರಿಸಲಾಯಿತು.

ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ನಡೆಸಲಾದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶಿವಕುಮಾರ, ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಎಂ ಮತ್ತಿತರರು ಇದ್ದರು.

ವರದಿ: ಉಲ್ಲಾಸ್ ಶಾನಭಾಗ ಶಿರಾಲಿ.

Leave a Reply

Your email address will not be published. Required fields are marked *

error: Content is protected !!