ಶ್ರೀರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ17ನೇ ಪಟ್ಟಾಭಿಷೇಕ

Share

ಪತ್ರಿಕಾ ಪ್ರಕಟಣೆ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಸೆಪ್ಟೆಂಬರ್. 3 ರಂದು ಬೆಳಿಗ್ಗೆ 11ಕ್ಕೆ ಜರಗಲಿದೆ.
ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದ ಶ್ರೀ ರಾಮ ಕ್ಷೇತ್ರದ ನಿರ್ಮಾತೃ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಂಕಲ್ಪದಂತೆ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ವಿವಿಧ ಶಾಖಾ ಮಠಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಶಾಖಾ ಮಠ ನಿರ್ಮಾಣದ ಕಾಮಗಾರಿ ಆರಂಭಗೊಂಡಿದೆ. ತಮ್ಮ ಪಟ್ಟಾಭಿಷೇಕದ ದಶಮಾನೋತ್ಸವ ಸಂದರ್ಭದಲ್ಲಿ ಯಶಸ್ವಿಯಾಗಿ ರಾಷ್ಟ್ರೀಯ ಧರ್ಮ ಸಂಸದ್ ಆಯೋಜಿಸಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದರು.
ಕಳೆದ 6 ವರ್ಷಗಳಿಂದ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿದ್ದು, ಈ ವರ್ಷ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕು ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಜು.10ರಿಂದ ಅ.20ರವರೆಗೆ ಚಾತುರ್ಮಾಸ್ಯ ಪ್ರತಾಚಾರಣೆ ಕೈಗೊಂಡಿದ್ದಾರೆ.
ಇದೆ ಸೆ.3ರಂದು ನಡೆಯುವ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಆದ್ದರಿಂದ ಭಟ್ಕಳ ತಾಲೂಕಿನ ಸಮಾಜ ಭಾಂದವರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ನಾಮಧಾರಿ ಸಮಾಜದ ಗುರುಮಠ ದ ಅಧ್ಯಕ್ಷರಾದ ಅರುಣ್ ನಾಯ್ಕ್ ಹಾಗೂ ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀಧರ ನಾಯ್ಕ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!