ಹಿಂದುಳಿದ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ನಡೆಯಲಿದ್ದು ಈ ಕಾರ್ಯಕ್ಕೆ ಆಧಾರ ಲಿಂಕ್ಸ್ ಮೊಬೈಲ್ ನಂಬರ್ ಕಡ್ಡಾಯವಾಗಿರುವ ಕಾರಣ ಭಟ್ಕಳ ತಾಲೂಕಿನ ಎಲ್ಲಾ ಸಾರ್ವಜನಿಕರು ತಮ್ಮ ಚಾಲ್ತಿಯಲ್ಲಿರುವ ಮೊಬೈಲ್ ನಂಬರನ್ನು ಆಧಾರ್ ಕಾರ್ಡಿಗೆ ಲಿಂಕ್ ಅಥವಾ ಅಪ್ಡೇಟ್ ಮಾಡಿಕೊಳ್ಳಲು ತಿಳಿಸಿದೆ ಹಾಗೂ ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು ಸಮೀಕ್ಷೆ ಕಾರ್ಯವನ್ನು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದ ಮೇಲೆ ಸಮೀಕ್ಷಾದಾರರು ಸಮೀಕ್ಷೆ ಮಾಡುವುದರಿಂದ ಸಮೀಕ್ಷೆದಾರರು ಮನೆಗೆ ಭೇಟಿ ನೀಡಿದಾಗ ಪಡಿತರ ಚೀಟಿ ಆಧಾರ ಸಂಖ್ಯೆ ವಿಕಲಚೇತನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರ ಮತದಾರರ ಗುರುತಿನ ಚೀಟಿ ಇಟ್ಟುಕೊಂಡಿದ್ದು ಸಮೀಕ್ಷೆ ಸುಲಭ ವಾಗುವಂತೆ ಸಮೀಕ್ಷೆಯ ಸಮಯದಲ್ಲಿ ಇ ಕೆ ವೈ ಸಿ ಮಾಡುವಾಗ ಆ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಓಟಿಪಿ ನೀಡಿ ಎಲ್ಲಾ ಪ್ರಶ್ನೆಗಳಿಗೆ ಕುಟುಂಬದ ಸದಸ್ಯರು ಮಾಹಿತಿ ನೀಡಲು ತಿಳಿಸಿದೆ 6 ವರ್ಷದ ಮೇಲ್ಪಟ್ಟ ಚೀಟಿ ಮತ್ತು ಹೆಸರು ಇಲ್ಲದಿರುವ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯ ಹಾಗೂ ಆಧಾರ್ ಕಾರ್ಡ್ ಇಲ್ಲದಿದ್ದಲ್ಲಿ ಮತ್ತು ಆಧಾರ್ ಕಾರ್ಡ್ ಇದ್ದು ಲಿಂಕ್ ಆಗಿರುವ ಮೊಬೈಲ್ ನಂಬರ್ ಇಲ್ಲದಿದ್ದರೆ ಹತ್ತಿರದ ಆಧಾರ್ ಎನ್ರೋಲ್ ಮೆಂಟ ಸೆಂಟರ್ ಗೆ ಭೇಟಿ ನೀಡಿ ನೋಂದಣಿ ಮಾಡಿಸಿ
ಪ್ರಶ್ನಾವಳಿಯಲ್ಲಿ ಪ್ರತಿ ಸದಸ್ಯರು ವಿದ್ಯಾರ್ಹತೆ ಕೌಸಲ್ಯ ತರಬೇತಿಯ ಅಗತ್ಯತೆ ಆದಾಯ ಕುಟುಂಬದ ಸ್ಥಿರ ಮತ್ತು ಚರಾಸ್ತಿಯ ವಿವರಗಳು ಧರ್ಮ ಜಾತಿ ಉಪಜಾತಿ ಹಾಗೂ ಕುಲಕಸುಬು ಮುಂತಾದ ವಿಷಯಗಳು ಹಾಗೂ ಪ್ರಶ್ನೆಗಳಿಗೆ ಕುಟುಂಬದ ಸದಸ್ಯರು ಸರಿಯಾದ ಮಾಹಿತಿಯನ್ನು ನೀಡಲು ತಯಾರಿರಬೇಕಾಗಿರುತ್ತದೆ ಸಮೀಕ್ಷೆಯ ಪ್ರಶ್ನಾವಳಿಯ ಬಗ್ಗೆ ಅರಿವು ಮೂಡಿಸಲು ಪದವಿ ವಿದ್ಯಾರ್ಥಿಗಳ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ರ ಸಮೀಕ್ಷಾ ಪೂರ್ವ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಮಾಹಿತಿ ಅಗತ್ಯ ವಿದ್ದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ 8050770004ಗೆ ಕರೆ ಮಾಡಿ ಅಥವಾ ವೆಬ್ಸೈಟ್ ವಿಳಾಸ htt:kscbc.Karnataka. gov. in ನೋಡಬಹುದು ಸಮೀಕ್ಷೆದಾರರು ಮನೆಗೆ ಭೇಟಿ ನೀಡಿದಾಗ ಮಾಹಿತಿಯನ್ನು ನೀಡಲು ತಿಳಿಸಿದೆ.