
ಭಟ್ಕಳದಲ್ಲಿ ಸೇವೆ ಸಲ್ಲಿಸಿದ ವೈದ್ಯ ಭೋಪಾಲ್ ನಲ್ಲಿ ನೇಣಿಗೆ ಶರಣು.
ಭಟ್ಕಳ:ಸ್ತ್ರೀರೋಗ ತಜ್ಞರಾಗಿ ಭಟ್ಕಳದ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ.
ಡಾಕ್ಟರ್ ಸಹನ ಎಸ್. ಕುಮಾರ್(39) ಎನ್ನುವವರೇ ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ . ಭೋಪಾಲ್ ನ ಟಿ.ಟಿ. ನಗರದಲ್ಲಿರುವ ಹೋಟೆಲೋoದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನ ತೆಂಕಮಿಜಾರು ಗ್ರಾಮದ ಡಾಕ್ಟರ್ ಸಹನ್ ಕುಮಾರ್2021 ರಿಂದ2024 ರ ಜೂನ್ ವರೆಗೆ ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚಿಗೆ ಪ್ರಸ್ತುತವಾಗಿ ಇವರು ಬಾಲಾ ಘಾಟ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೇರಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದರು.

ಮಧ್ಯ ಪ್ರದೇಶ ವೈದ್ಯಕೀಯ ಮಂಡಳಿಯ ಕೌನ್ಸಲಿಂಗ್ ಸಭೆಯಲ್ಲಿ ಪಾಲ್ಗೊಳ್ಳಲು ಅವರು ಭೋಪಾಲ್ಗೆ ತೆರಳಿದ್ದು, ಆದರೆ ಸಭೆಗೆ ಹಾಜರಾಗುವ ಮೊದಲೇ ಹೋಟೆಲ್ ನ ಕೊಠಡಿಯಲ್ಲಿ ನೇಣು ಬಿಗಿದು ಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಕೊಠಡಿಯ ಬಾಗಿಲು ತೆರೆದುಕೊಳ್ಳದ ಕಾರಣ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ ಹೋಟೆಲ್ ಕೊಠಡಿಯ ಸ್ನಾನ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿದೆ.
ಬ್ಯಾಗ್, ಇಯರ್ ಫೋನ್, ಹಾಗೂ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಯಾರೊಂದಿಗಾದರೂ ಫೋನ್ ಮಾಡಿದ್ದಾರೆಯೇ! ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ: ಉಲ್ಲಾಸ್ ಶಾನಭಾಗ ಶಿರಾಲಿ.