ಭಟ್ಕಳ: ಸೋಮವಾರದಂದು ಭಟ್ಕಳದಲ್ಲಿ ಮನೆ ಮನೆ ಪೊಲೀಸ ಭೇಟಿ ಕಾರ್ಯಕ್ರಮ ಹೇಗೆ ನಡೆಯುತ್ತಿದೆ ಹಾಗೂ ಈ ಕಾರ್ಯಕ್ರಮದ ಬಗ್ಗೆ ಜನರು ಹೇಗೆ ಸ್ಪಂದಿಸುತ್ತಿದ್ದಾರೆ ಎಂದು ಖುದ್ದು ತಾವೇ ಮನೆ ಮನೆಗೆ ಭೇಟಿ ನೀಡಿ ಮಾತನಾಡಿದರು.
ನಮ್ಮ ಪೊಲೀಸ್ ಸಿಬ್ಬಂದಿಗಳು ಪ್ರತಿಯೊಂದು ಠಾಣೆ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿದ ವೇಳೆ 112 ಪೊಲೀಸ್ ಎಮರ್ಜೆನ್ಸಿ ಮತ್ತು 1193 ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮದಿಂದ ತಮಗೆ ಆಗುತ್ತಿರುವ ಸಮಸ್ಯೆಗಳನ್ನು ಮನೆಯಲ್ಲಿ ಪೊಲೀಸರ ಬಳಿ ಹೇಳಲು ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಭಟ್ಕಳಕ್ಕೆ ಭೇಟಿ ನೀಡಿ ನಗರ ಠಾಣೆ ವ್ಯಾಪ್ತಿಯ ಆಸರಕೇರಿ ಭಾಗದ ಮನೆಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಈ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂದಿದ್ದೇನೆ ಎಂದರು.

ಕಳೆದ 2 ತಿಂಗಳಿನಿಂದ ನಡೆಯುತ್ತಿರು ಮನೆ ಮನೆ ಪೊಲೀಸ ಭೇಟಿಗೆ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಜನರು ಉತ್ತಮ ಸ್ಪಂದನೆ ನೀಡುತ್ತಿದ್ದು. ಜಿಲ್ಲೆಯಲ್ಲಿ ಈಗಾಗಲೇ 47% ಮನೆಗಳಿಗೆ ಭೇಟಿ ನೀಡುವ ಕಾರ್ಯ ಮುಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಹೇಳಿದರು.
ಅದೇ ರೀತಿ ಮಾದಕ ವಸ್ತುಗಳ ಸೇವನೆ ಮಾಡುವವರ ಅಥವಾ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಕ್ಯೂಆರ್ ಕೋಡ್ ಸ್ಕ್ಯಾನರ್ ಮಾಡಲಾಗಿದ್ದು. ತಾಲೂಕಿನ ವ್ಯಾಪ್ತಿಯಲ್ಲಿ ಯಾವದೇ ಪ್ರಕರಣ ಕಂಡು ಬಂದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್ ಮೂಲಕ ಮಾಹಿತಿ ನೀಡಬಹುದು ಆದರೆಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಮಹೇಶ ಎಂ.ಕೆ, ನಗರ ಹಾಗೂ ಗ್ರಾಮೀಣ ಠಾಣೆ ಸಿಪಿಐಗಳಾದ ದಿವಾಕರ ಪಿ.ಎಂ. ಮಂಜುನಾಥ ಲಿಂಗಾರೆಡ್ಡಿ ಹಾಗೂ ಪೊಲೀಸ ಸಿಬ್ಬಂದಿಗಳು ಉಪಸ್ಥಿತರಿದ್ದರು