ಶಿರಾಲಿ ಚೆಕ್ ಪೋಸ್ಟ್ ಬಳಿ ಅಕ್ರಮ ಮರುಳ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ ಪಡೆದ ಗ್ರಾಮೀಣ ಪೊಲೀಸ್

Share

ಭಟ್ಕಳ : ಭಟ್ಕಳ ಗ್ರಾಮೀಣ ಪೊಲೀಸರು ಪರಿಸರಕ್ಕೆ ಹಾನಿ ಉಂಟುಮಾಡುವ ಅಕ್ರಮ ಮರಳು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಭರಮಪ್ಪ ಬೆಳಗಲಿ ಅವರ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ಶಿರಾಲಿ ಚೆಕ್ ಪೋಸ್ಟ್ ಬಳಿ ನಡೆಸಿದ ತಪಾಸಣೆಯಲ್ಲಿ ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಪತ್ತೆ ಹಚ್ಚಿದ್ದಾರೆ ಯಾವುದೇ ದಾಖಲೆಗಳಿಲ್ಲದ ಕಾರಣ ವಾಹನ ಮತ್ತು ಮರಳನ್ನು ವಶಕ್ಕೆ ಪಡೆಯಲಾಗಿದ್ದು ಹೊನ್ನಾವರ ತಾಲೂಕಿನ ಮಂಕಿಯ ಕಾಜಿಮನೆ ಪ್ರದೇಶದ ಲಾರಿ ಚಾಲಕ ನಾಗರಾಜ್ ನಾಯ್ಕ್ ಎಂಬುವರನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ ಉಲ್ಲಾಸ್ ಶಾನಭಾಗ್

Leave a Reply

Your email address will not be published. Required fields are marked *

error: Content is protected !!