ಭಟ್ಕಳ: ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾವಳಿಯು ಜರುಗಿತು.
ನವೆಂಬರ್ ೨೪ ರಂದು ಜರುಗುವ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ವ್ಯಾಪ್ತಿಯ ಕಾಲೇಜುಗಳ ಏಕ ವಲಯದ ಪುರುಷ ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಯುವ ಉದ್ಯಮಿ ಶ್ರೀ ಲಕ್ಷ್ಮೀಶ್ ಎಂ ನಾಯ್ಕ್ ರವರು ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಚದುರಂಗ ಸ್ಪರ್ಧೆಯ ನಿರ್ಣಾಯಕರಾದ ಅಣ್ಣಪ್ಪ ದೇವಾಡಿಗ, ಉಪನಿರ್ಣಾಯಕರಾದ ಧನರಾಜ್ ಖಾರ್ವಿ, ರಾಷ್ಟ್ರೀಯ ಚೆಸ್ ತರಬೇತುದಾರರಾದ ಗುರುರಾಜ್ ಶೆಟ್ಟಿ ಯವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಪ್ರಾಂಶುಪಾಲರಾದ ಶ್ರೀನಾಥ್ ಪೈ ರವರು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪ ಪ್ರಾಂಶುಪಾಲರಾದ ಪಿ.ಎಸ್.ಹೆಬ್ಬಾರ್ ಅವರು ಕಾಲೇಜಿನಲ್ಲಿ ಸಿದ್ದಪಡಿಸಿದ ಜಿಎಸ್‌ಟಿ ೨.೦ ಮಾದರಿಗಳಿಗಾಗಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿದರು. ಮಹಿಳೆಯರ ವಿಭಾಗದಲ್ಲಿ ಅಳ್ಳಂಕಿ ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ. ಸಂಜನಾ ನಾಯ್ಕ, ದಿ ನ್ಯೂ ಇಂಗ್ಲೀಷ ಪಿಯು ಕಾಲೇಜಿನ ಕುಮಾರಿ. ತನುಶ್ರೀ ಆರ್, ಅಳ್ಳಂಕಿ ಯ ಸರಕಾರಿ ಪದವಿ ಪೂರ್ವ ಕಾಲೇಜಿನಕುಮಾರಿ. ಸಿಂಧು ಗೌಡ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಪುರುಷರ ವಿಭಾಗದಲ್ಲಿ ಅಂಜುಮನ್ ಪದವಿ ಪೂರ್ವ ಕಾಲೇಜಿನ ಕುಮಾರ. ಆಯಮನ್, ದಿ ನ್ಯೂ ಇಂಗ್ಲೀಷ ಪಿಯು ಕಾಲೇಜಿನ ಕುಮಾರ.ಅಂಕಿತ್, ಅಂಜುಮನ್ ಪದವಿ ಪೂರ್ವ ಕಾಲೇಜಿನ ಕುಮಾರ. ಮುಸಾಹ್ಹಿಲ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು.
ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುರೇಶ ನಾಯಕ, ದೈಹಿಕ ಶಿಕ್ಷಣ ನಿರ್ದೇಶಕರಾದ ವಿನಾಯಕ ನಾಯ್ಕ ಉಪಸ್ಥಿತರಿದ್ದರು. ಕುಮಾರ್ ಕಾರ್ತಿಕ್ ಶಾನಭಾಗ್ ಕಾರ್ಯಕ್ರಮವನ್ನು ನಿರೂಪಿಸಿ ವಂದನಾರ್ಪಣೆ ಮಾಡಿದರು.
