ಕರ್ನಾಟಕ ವಿಶ್ವವಿದ್ಯಾಲಯದ ಸಂಲಗ್ನ ಕಾಲೇಜುಗಳಿಗೆ ಹೊನ್ನಾವರದ ಎಸ್.ಡಿ.ಎಂ ಕಾಲೇಜಿನಲ್ಲಿ ಆಯೋಜಿಸಲಾದ ೭೨ನೇ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ೩೧ ಅಂಕ ಗಳಿಸಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜು ನಾಲ್ಕನೇ ಸ್ಥಾನ ಪಡೆಯಿತು.
ಜಾವೆಲಿನ್, ಡಿಸ್ಕ್, ಉದ್ದ ಜಿಗಿತ, ಎತ್ತರ ಜಿಗಿತ, ರಿಲೇ, ನಡಿಗೆ, ಓಟ್ ಮುಂತಾದ ಕ್ರೀಡೆಗಳಲ್ಲಿ ೧೬ ಕ್ರೀಡಾಪಟುಗಳು ಪದಕ ಹಾಗೂ ಪ್ರಮಾಣಪತ್ರ ವನ್ನು ಪಡೆದರು. ಈ ಯುವ ಕ್ರೀಡಾಪಟುಗಳ ಅಪ್ರತಿಮ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿರುತ್ತಾರೆ.
ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸಾಧನೆ
