ಭಟ್ಕಳ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅರಣ್ಯವಾಸಿಗಳ ಕಾನೂನು ಜಾಗೃತ ಜಾಥ ಸ್ಥಳೀಯ ಉಪ ವಿಭಾಗ ಅಧಿಕಾರಿ ಕಾವ್ಯಾರಾಣಿ ಅವರ ಅನುಪ ಸ್ಥಿತಿಯಲ್ಲಿ ತಹಶೀಲ್ದಾರ ನಾಗೇಂದ್ರ ಕೆ ಎಸ್ ಅವರಿಗೆ ಮನವಿ ಮತ್ತು ಕಾನೂನು ಜಾಗೃತ ಕರಪತ್ರ ನೀಡುತ್ತಾ ಮಾತನಾಡಿದ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕಅವರು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ ಹಕ್ಕಿಗೆ ಮೂರು ತಲೆಮಾರಿನ ನಿರ್ದಿಷ್ಟ ವಯಕ್ತಿಕ ದಾಖಲೆಗೆ ಒತ್ತಾಯಿಸತಕ್ಕದ್ದಲ್ಲ. ಇಂತಹ ಪ್ರಕ್ರಿಯೆ ಕಾನೂನಿಗೆ ವ್ಯತಿರಿಕ್ತವಾಗಿದೆ. ಸೆಪ್ಟೆಂಬರ್ 20012 ರಲ್ಲಿಯೇ ನಿರ್ದಿಷ್ಟ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ ಎಂದು ಕಾಯಿದೆ ತಿದ್ದಪಡಿಯಾಗಿದ್ದು, ಇದಕ್ಕೆ ಪೂರಕವಾಗಿ ಗುಜಾರತ್ ಹೈ ಕೋರ್ಟ್ ಸಹಿತ ದಾಖಲೆಯ ಸಾಕ್ಷಿ ಒತ್ತಾಯಿಸಲು ಅವಕಾಶವಿಲ್ಲವೆಂದು ಉಲ್ಲೇಖಿಸಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯದ ಆದೇಶದಲ್ಲಿ ಮಂಜೂರಿ ಪ್ರಕ್ರಿಯೆಯಲ್ಲಿ ದಾಖಲೆಗಳಿಗೆ ಆಗ್ರಹಿಸಿ ಅರ್ಜಿಗಳನ್ನು ತಿರಸ್ಕರಿಸುವುದು ಸಮಂಜಸವಲ್ಲ ಎಂದು ನಿರ್ಧೇಶಿಸಿದ್ದು ಇರುತ್ತದೆ. ಅಲ್ಲದೇ ಮೂರು ತಲೆಮಾರಿನ ಸಾಗುವಳಿ ಕ್ಷೇತ್ರದಲ್ಲಿನ ಜನವಸತಿ ಪ್ರದೇಶವೆಂದು ಪುಷ್ಠೀಕರಿಸುವುದು ಅವಶ್ಯವೆಂದು ಸ್ಪಷ್ಟಪಡಿಸಿದೆ, ಮಂಜೂರಿ ಪ್ರಕ್ರಿಯೆಯಲ್ಲಿ ಕಾನೂನಿಗೆ ವ್ಯತಿರಿಕ್ತವಾಗಿ ಅರ್ಜಿ ಪರಿಶೀಲಿಸಲಾಗಿರುವುದರಿಂದ ರಾಜ್ಯದಲ್ಲಿ ಶೇ.88.90 ಅರ್ಜಿಗಳು ಹಾಗೂ ಜಿಲ್ಲೆಯಲ್ಲಿ ಶೇ 83.50 ಅರ್ಜಿ ತಿರಸ್ಕರಿಸ್ಪಟ್ಟಿದೆ ಎಂದು ವಿಷಾಧ ವ್ಯಕ್ತ ಪಡಿಸಿದರು.ಜಿಲ್ಲಾದ್ಯಂತ 132 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅರಣ್ಯವಾಸಿಗಳಲ್ಲಿ ಕಾನೂನು ತಿಳುವಳಿಕೆ ನೀಡುವ ಉದ್ದೇಶದಿಂದ ಕಾನೂನು ಜಾಗ್ರತ ಜಾಥಕ್ಕೆ ಸಂಭoದಿಸಿದ ಕಾರ್ಯಕ್ರಮ ಸಂಘಟಿಸಲು ನಿರ್ಧರಿಸಲಾಗಿದೆ. ನಿರ್ದಿಷ್ಟ ದಾಖಲೆಗಳ ಒತ್ತಾಯಿಸುವಿಕೆಗೆ ಅವಕಾಶವಿಲ್ಲದ ಕುರಿತು ಮತ್ತು ಸಾಗುವಳಿ ಪತ್ರಕ್ಕೆ ಸಂಬoಧಿಸಿ ಅರಣ್ಯವಾಸಿಗಳು ಸಲ್ಲಿಸಬೇಕಾದ 9 ದಾಖಲೆಗಳ ಪಟ್ಟಿಗಳನ್ನು ಒಳಗೊಂಡಿರುವ ಮೂರು ಲಕ್ಷ ಕರಪತ್ರವನ್ನು ವಿತರಿಸಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಪಾಂಡುರoಗ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಂಚಾಯಕ ದೇವರಾಜ ಗೊಂಡ ವಂದಿಸಿದರು, ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಇಬ್ರಾಹೀಂ ಗೌಡಳ್ಳಿ, ರಪೀಕ್ , ನವೀನ್ ಜೈನ್, ಈಶ್ವರ ನಾಯ್ಕ ಹಾಡವಳ್ಳಿ, ಚಂದ್ರ ನಾಯ್ಕ ಬೈರೋಳೆ,ರತ್ನ ನಾಯ್ಕ ರಾಘವೇಂದ್ರ ಮರಾಠಿ, ವಿಮಲಾ ಮೋಗೇರ, ಕವಿತಾ ಮಂಜುನಾಥ ಗೋಂಡ, ನಾಗಮ್ಮ ಮೋಗೇರ, ದತ್ತ ನಾಯ್ಕ ಹಸವಳ್ಳಿ, ಸಬೀರ್, ಮೋಯೈದ್ದೀನ್, ನತ್ತಾರ, ಜಮಾವೀರ್ ಜಾಬೀರ್, ಮುಂತಾದವರು ನೇತೃತ್ವ ವಹಿಸಿದರು.
