ಭಟ್ಕಳ ತಹಶೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ

Share

ಭಟ್ಕಳ: ತಾಲೂಕ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಮಂಗಳವಾರ ಬೆಳಿಗ್ಗೆ 7:20ಕ್ಕೆ ಗಯಾನ ರಮೇಶ್ ಹೆಸರಿನ ಮೇಲ್ ಖಾತೆಯಿಂದ ಬಾಂಬ್ ಬೆದರಿಕೆಯ ಕರೆ ಬಂದಿದೆ. ತಮಿಳು ಮತ್ತು ಪಾಕಿಸ್ತಾನಿಗಳ ಸೇಡು ಎಂದೂ ಬರೆದಿರುವ ದುಷ್ಕರ್ಮಿಗಳು ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿಯೇ ಪ್ರಬಲ ಬಾಂಬ್ ಸ್ಪೋಟ ಸಂಭವಿಸಲಿದೆ ಎಲ್ಲರನ್ನೂ ಬೇಗ ತೆರವುಗೊಳಿಸಿ ಎಂದು ಸಂದೇಶ ರವಾನೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಕಚೇರಿಯಿಂದ ಪೊಲೀಸರಿಗೆ ಮಾಹಿತಿಯನ್ನ ನೀಡಲಾಗಿದೆ. ಕೂಡಲೇ ಅಲರ್ಟ್ ಆದ ಪೊಲೀಸರು ಕಾರವಾರದಿಂದ ಭಟ್ಕಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನ ಕರೆಸಿ ಶೋಧ ಕಾರ್ಯ ಮಾಡಿದ್ದಾರೆ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಶಂಕಿಸಲಾಗಿದೆ. ಈ ಹಿಂದೆಯೂ ಭಟ್ಕಳ ಪೊಲೀಸ್ ಠಾಣೆಗೆ ಬಾಂಬ ಬೆದರಿಕೆ ಕರೆ ಬಂದಿತ್ತು ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಭಟ್ಕಳ ತಹಶೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!