

ಭಟ್ಕಳ : ದಲಿತ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ರಾಜ್ಯಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ರಾಜ್ಯ ಪರಿಶಿಷ್ಟ ಜಾತಿ ಮೀಸಲಾತಿ ರಕ್ಷಣಾ ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀ ಕಿರಣ್ ಶಿರೂರು ಅವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ವಿಶಿಷ್ಟ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಮೀಸಲಾತಿ ವಿಚಾರದಲ್ಲಿ ದಲಿತ ಜಾಗೃತಿ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿರುವುದನ್ನು ಮತ್ತು ಸೇವೆಯನ್ನು ಗುರುತಿಸಿ, ದೆಹಲಿಯ ಪಂಚಶೀಲ ಆಶ್ರಮದಲ್ಲಿ ಡಿಸೆಂಬರ್ 12 -2025ರಂದು ನಡೆದ 41ನೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ವಿಶಿಷ್ಟ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಡಾ. ಸತ್ಯನಾರಾಯಣ ಜಟಿಯ ಹಾಗೂ ದಲಿತ ಸಾಹಿತ್ಯ ಅಕಾಡೆಮಿಯ ರಾಷ್ಟ್ರೀಯ ಅಧ್ಯಕ್ಷ ಡಾ. ಸುಮನಾಕ್ಷರ ಅವರ ಉಪಸ್ಥಿತಿಯಲ್ಲಿ ಕಿರಣ್ ನಾರಾಯಣ್ ಶಿರೂರ್ ಅವರಿಗೆ ಗೌರವಿಸಲಾಯಿತು.
