
ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ
ಶಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ. ಸಾಕ್ಷಿ ನಾಯ್ಕ ( ಭಟ್ಕಳ ತಾಲೂಕಿನ ಶ್ರೀಮತಿ ಕವಿತಾ ನಾಯ್ಕ ಹಾಗೂ ಆರಕ್ಷಕರಾಗಿರುವ ಶ್ರೀ ದೇವು ನಾಯ್ಕ ರವರ ಪುತ್ರಿ ) ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದು, ಆಂಧ್ರಪ್ರದೇಶದ ಎನ್.ಟಿ.ಆರ್ ವಿಶ್ವವಿದ್ಯಾಲಯದಲ್ಲಿ ಅಂತರ ವಿಶ್ವವಿದ್ಯಾಲಯ-ದಕ್ಷಿಣ ಭಾರತ ವಲಯವನ್ನು ಪ್ರತಿನಿಧಿಸಲಿದ್ದು, ಈ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಕರು, ಸಿಬ್ಬಂದಿವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟಿçÃಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.
