ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ

Share

ಹೊನ್ನಾವರ: ಜ.07 ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಬಳಿ ತಡರಾತ್ರಿ ಅತಿವೇಗದಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು, ಬಳಿಕ ಕಂದಕಕ್ಕೆ ಉರುಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು,ಕಂದಕಕ್ಕೆ ಬೀಳುತ್ತಿದ್ದಂತೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಕಾರು ಬೆಂಕಿಗೆ ಆಹುತಿಯಾಗಿದೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಒಳಗಡೆ ಇರುವ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗದೆ ಕಾರಿನೊಳಗಡೆ ಸಜೀವ ದಹನವಾಗಿದ್ದಾರೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲವಾಗಿದ್ದರಿಂದ ವಾಹನದ ನಂಬರ್ ಪ್ಲೇಟ್ ಕೂಡ ನಾಶವಾಗಿದ್ದು ಕಾರಿನ ಮಾಲಕರು ಹಾಗೂ ಮೃತರ ಗುರುತನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಕಷ್ಟ ಸಾಧ್ಯವಾಗಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಹೊನ್ನಾವರದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತದ ನಿಖರ ಕಾರಣ ಮತ್ತು ಮೃತರ ವಿವರ ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!