ಏಳನೇ ತರಗತಿ ವಿದ್ಯಾರ್ಥಿಗಳಿಗೆ ಭಾವಪೂರ್ಣ ವಿದಾಯ

Share

ಮೊಹಿದ್ದೀನ್ ಸ್ಟ್ರೀಟ್ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ

ಭಟ್ಕಳ: ಮದೀನಾ ಕಾಲೋನಿಯ ಮೊಹಿದ್ದೀನ್ ಸ್ಟ್ರೀಟ್‌ನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿವಿದ್ಯಾರ್ಥಿಗಳ ವಿದಾಯ ಕಾರ್ಯಕ್ರಮ ಭಾವಪೂರ್ಣವಾಗಿ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಗಾಲಿಬ್ ಔಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ್ ನಾಯ್ಕ, ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ, ಶಿಕ್ಷಕರ ಸಂಘದ ಎಂ.ಡಿ. ರಫೀಖ್, ಎಸ್.ಎ. ಲೋಹಾನಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವು ವಿದ್ಯಾರ್ಥಿಗಳ ಸ್ವಾಗತಗೀತೆಯೊಂದಿಗೆ ಆರಂಭವಾಯಿತು. ಅತಿಥಿಗಳಿಗೆ ಪುಷ್ಪಗುಚ್ಛ ನೀಡಿ
ಸನ್ಮಾನಿಸಲಾಯಿತು. ಏಳನೇ ತರಗತಿ ವಿದ್ಯಾರ್ಥಿಗಳು ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡು, ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಮುಖ್ಯ ಅತಿಥಿ ಎಂ.ಎನ್. ನಾಯ್ಕ ಮಾತನಾಡಿ, ಶಿಕ್ಷಣವು ವ್ಯಕ್ತಿತ್ವ ನಿರ್ಮಾಣದ ಪಯಣವಾಗಿದ್ದು, ವಿದ್ಯಾರ್ಥಿಗಳು
ಮುಂದಿನ ಹಂತದ ಶಿಕ್ಷಣದಲ್ಲಿ ಶಿಸ್ತು ಮತ್ತು ಪರಿಶ್ರಮವನ್ನು ಪಾಲಿಸಬೇಕು ಎಂದು ಹೇಳಿದರು. ಉಲ್ಲಾಸ್ ನಾಯ್ಕ
ಪ್ರಾಥಮಿಕ ಶಿಕ್ಷಣವೇ ಭವಿಷ್ಯದ ಅಡಿಪಾಯವಾಗಿದ್ದು, ಶಿಕ್ಷಕರ ಮಾರ್ಗದರ್ಶನವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮುಹಮ್ಮದ್ ರಝಾ ಮಾನ್ವಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಮಾನವೀಯ
ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಂ.ಡಿ. ರಫೀಖ್ ಹಾಗೂ ಎಸ್.ಎ. ಲೋಹಾನಿ ಶ್ರಮ,
ಪ್ರಾಮಾಣಿಕತೆ ಮತ್ತು ಆತ್ಮವಿಶ್ವಾಸದ ಮಹತ್ವವನ್ನು ಒತ್ತಿಹೇಳಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಗಾಲಿಬ್ ಔಟಿ ಶಾಲೆಯ ಸಾಧನೆಗಳನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳು ಎಲ್ಲೆಡೆ ಹೋದರೂ ಶಾಲೆಯ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದು ಹಾರೈಸಿದರು. ಶಿಕ್ಷಕ ದೇವರಾಜ ದೇವಾಡಿಗ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!