ಮುರುಡೇಶ್ವರ : ದಿನಾಂಕ ೨೭.೦೬.೨೦೨೬ ಶನಿವಾರದಂದು ಇಲ್ಲಿನ ಪ್ರತಿಷ್ಠಿತ ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ರೋಷನಿ ಆಡಿಟೋರಿಯಮ್‌ನಲ್ಲಿ ೨೦೨೬-೨೦೨೭ ನೇ ಸಾಲಿನ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ, ಆಡಳಿತ ನಿರ್ದೇಶಕಿಯಾಗಿರುವ
ಡಾ. ಪುಷ್ಪಲತಾ ಮಂಕಾಳ್ ವೈದ್ಯರವರು ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಂಡು ಜೀವನದಲ್ಲಿ ಉತ್ತಮವಾದ ಸಾಧನೆಯನ್ನು ಮಾಡಿ ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕು ಹಾಗೂ ವಿದ್ಯಾರ್ಥಿಗಳಲ್ಲಿ ತಾಳ್ಮೆ, ಶಿಸ್ತು, ಸಮಯ ಪ್ರಜ್ಞೆ, ಪ್ರಾಮಾಣಿಕತೆ ಇರಬೇಕು ಎಂದು ತಿಳಿಸಿದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ ಶ್ರೀ ಗಿರೀಶ್ ಬಿ. (ಡಿವೈಎಸ್‌ಪಿ ಭಟ್ಕಳ) ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಾಯಕ ಎಂದರೆ ಒಂದು ಗುಂಪಿನ ನಾಯಕತ್ವವನ್ನು ವಹಿಸಿಕೊಂಡು ಆ ಗುಂಪಿನ ಉನ್ನತಿಗಾಗಿ ಹೋರಾಡಿ ಸಾಧನೆ ಮಾಡುವವರು ಎಂದು ತಿಳಿಸಿದರು, ಬೀನಾ ವೈದ್ಯ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಯೀಂ ಗೋರಿ ಹಾಗೂ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ನಾಯ್ಕ ಇವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಚುನಾಯಿತರಾದ ವಿದ್ಯಾರ್ಥಿ ಸಂಸತ್ತಿನ ನಾಯಕರಿಗೆ ಪದವಿ ಪ್ರಧಾನ ಮಾಡಿ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ನಾಯ್ಕ ಇವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಸಂದರ್ಭದಲ್ಲಿ ಬೋಧಕ ಹಾಗೂ ಬೊಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
