ಬೀನಾ ವೈದ್ಯ ಶಿಕ್ಷಣ ಸಂಸ್ಥೆ ವಿದ್ಯಾಥಿಗಳಿಂದ “ತಂದೆಯರ ದಿನ” ಆಚರಣೆ

Share

ಭಟ್ಕಳ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ತಂದೆಯರ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು.ಈ ಕಾರ್ಯಕ್ರಮವು ತಂದೆಯರ ಪ್ರೀತಿ, ತ್ಯಾಗ ಮತ್ತು ಮಾರ್ಗದರ್ಶನವನ್ನು ಗೌರವಿಸುವ ಉದ್ದೇಶದಿಂದ ನಡೆಯಿತು.ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ, ನಂತರ ವಿದ್ಯಾಥಿಗಳು ತಂದೆಯರ ಮಹತ್ವವನ್ನು ವಿವರಿಸುವ ಕವನ,ಹಾಡು ಮತ್ತು ಭಾಷಣವನ್ನು ಪ್ರಸ್ತುತಪಡಿಸಿದರು. ವಿದ್ಯಾಥಿಗಳು ತಮ್ಮ ತಂದೆಯವರಿಗೆ ಶುಭಾಷಯ ಪತ್ರಗಳು ಮತ್ತು ಕೈಯಿಂದ ತಯಾರಿಸಿದ ಉಡುಗೊರೆಗಳನ್ನು ನೀಡಿ ಪ್ರೀತಿಯನ್ನು ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ತಂದೆಯರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಸಲ್ಲಿಸಿದರು

Leave a Reply

Your email address will not be published. Required fields are marked *

error: Content is protected !!