ಮುರಡೇಶ್ವರ: ಜುಲೈ ೦೯: ಇಲ್ಲಿನ ಪ್ರತಿಷ್ಠಿತ ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಇಂದು ವಿವಿಧ ಶೈಕ್ಷಣಿಕ ಕ್ಲಬ್‌ಗಳ ಉದ್ಘಾಟನಾ ಕಾರ್ಯಕ್ರಮವನ್ನು ವಿಜೃಂಭಣೆಯಿoದ ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸೃಜನಶೀಲತೆ, ಸಂಶೋಧನಾ ಮನೋಭಾವ ಹಾಗೂ ವಿವಿಧ ವಿಷಯಗಳಲ್ಲಿ ಆಸಕ್ತಿ ಮತ್ತು ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಶಾಲೆಯ ಸೈನ್ಸ್ ಕ್ಲಬ್, ಮ್ಯಾಥ್ಸ್ ಕ್ಲಬ್, ಸೋಶಿಯಲ್ ಕ್ಲಬ್, ಇಂಗ್ಲಿಷ್ ಕ್ಲಬ್, ಟೆಕ್ನೋ ಕ್ಲಬ್, ಕನ್ನಡ ಕ್ಲಬ್, ಹಿಂದಿ ಕ್ಲಬ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕ್ಲಬ್ ಗಳನ್ನು ಉಧ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಹಾಗೂ ನಿರ್ದೇಶಕರಾದ ಡಾ. ಪುಷ್ಪಲತಾ ಮಂಕಾಳ ವೈದ್ಯ ಅವರು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭÉ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಕ್ಲಬ್ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕÉ ಪೂರಕವಾಗಿದ್ದು, ಭವಿಷ್ಯದ ಸವಾಲುಗಳನ್ನು ಎದುರಿಸಲು ಅಗತ್ಯವಾದ ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ನಾಯ್ಕ್ ಅವರು ವಿದ್ಯಾರ್ಥಿಗಳಿಗÉ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಕ್ಲಬ್‌ಗಳ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಶಿಸ್ತು, ಬದ್ಧತೆ ಮತ್ತು ತಂಡದ ಮನೋಭಾವದೊಂದಿಗÉ ಕ್ಲಬ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್‌ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
